ಅಣ್ಣ ಹಜಾರೆಯವರ ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ. ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.
ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಲ್ಲೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು. ಈ ವಿಚಾರವನ್ನೇ ಪದೇ ಪದೇ ಹೇಳುತ್ತಿದ್ದ ಶ್ರೀ ರಾಜೀವ ದೀಕ್ಷಿತರು ಇಂದು ನಮ್ಮೊಂದಿಗಿಲ್ಲ. ಆದರೆ ಅವರ ಭಾಷಣದ ಕನ್ನಡ ರೂಪ ಹೇಳುತ್ತಿರುವ "ಜಾಗೋ ಭಾರತ್ " ನ ಸೂಲಿಬೆಲೆ (ಮಿಥುನ್) ಚಕ್ರವರ್ತಿ ಅಥವಾ "ಭಾರತ್ ಸ್ವಾಭಿಮಾನ್" ನ ಬಾಬಾ ರಾಮದೇವ್ ಅವರು ಉಪವಾಸ ಸತ್ಯಾಗ್ರಹ ಕೈಗೊಂಡು ಈ ಕಾರ್ಯಕ್ಕೆ ಮುಂದಾಗಲಿ ಎಂದು ನಮ್ಮ ಆಶಯ. ಕೇವೆಲ ಭಾಷಣಗಳಿಂದ ಏನೂ ಸಾಧ್ಯವಿಲ್ಲ. ಅಣ್ಣಾ ತೋರಿಸಿಕೊಟ್ಟ ಹಾದಿಯಲ್ಲಿ ಇವರು ಮುನ್ನಡೆಯಲಿ, ಭಾರತದ ಯುವಶಕ್ತಿ ಖಂಡಿತ ಅಭೂತಪೂರ್ವ ಬೆಂಬಲ ನೀಡಲಿದೆ.
ಜೈ ಭಾರತ ಮಾತೆ.